
ಪ್ರಧಾನಿ ನರೇಂದ್ರ ಮೋದಿ ಜನ್ಮದಿನ: ಸೆ. 17ರಂದು ‘ಆಶೀರ್ವಾದದ ದೀಪ’ ಬೆಳಗಿಸಲು ಬಿಜೆಪಿ ಕರ್ನಾಟಕ ರಾಜ್ಯದ ಕರೆ
ಬೆಂಗಳೂರು: ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಸೇವಾ ಸಂಕಲ್ಪ ಅಭಿಯಾನ’ದಡಿ ರಾಜ್ಯದ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವಂತೆ ಬಿಜೆಪಿ ಕರ್ನಾಟಕ ರಾಜ್ಯ ಮನವಿ ಮಾಡಿದೆ.
ದೇಶದ ಪ್ರಗತಿ ಮತ್ತು ಜನಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಲ್ಲಿಸಿರುವ ಸೇವೆಗೆ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರಿಗೆ ಭಗವಂತನು ದೀರ್ಘಾಯುಷ್ಯ, ಉತ್ತಮ ಆರೋಗ್ಯ ಹಾಗೂ ದೇಶ ಸೇವೆಗೆ ಇನ್ನಷ್ಟು ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಪಕ್ಷ ತಿಳಿಸಿದೆ.
ಸೆಪ್ಟೆಂಬರ್ 17ರಂದು ಸಂಜೆ ಮನೆಗಳಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸುವ ಮೂಲಕ ಸೇವಾ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿ, ಪ್ರಧಾನಮಂತ್ರಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಬಿಜೆಪಿ ಕರ್ನಾಟಕ ರಾಜ್ಯ ಕರೆ ನೀಡಿದೆ.







