Nice Road Bangalore| ನೈಸ್ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಲು ಜೆಡಿಎಸ್‌ ಆಗ್ರಹ


ಬೆಂಗಳೂರು: ನೈಸ್ (NICE/BMICP) ಯೋಜನೆಯಲ್ಲಿ ನಡೆದಿರುವ ಬೃಹತ್ ಅಕ್ರಮಗಳು ಹಾಗೂ FWA ಮತ್ತು PTA ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯನ್ನು ಖಂಡಿಸಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ ಕೂಡಲೇ ವಶಪಡಿಸಿಕೊಳ್ಳಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಶ್ರೀ ಸುರೇಶ್ ಬಾಬು ಸಿ. ಬಿ. ಅವರ ನೇತೃತ್ವದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ನೈಸ್ ಯೋಜನೆಯಿಂದ ರೈತರಿಗೆ ಆಗಿರುವ ಅನ್ಯಾಯಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು ಹಾಗೂ ಒಪ್ಪಂದಗಳ ಉಲ್ಲಂಘನೆ ಮತ್ತು ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಒತ್ತಾಯಿಸಿತು.


Advertisement

Recent Posts

error: Content is protected !!
Scroll to Top