PM Narendra Modi | ಪಿಎಂ ಸ್ವನಿಧಿಯಿಂದ ನಿಂಗಮ್ಮ ಅವರ ವ್ಯಾಪಾರಕ್ಕೆ ಹೊಸ ಚೈತನ್ಯ


ಬೆಂಗಳೂರು: ಪಿಎಂ ಸ್ವನಿಧಿ ಯೋಜನೆಯ ನೆರವಿನಿಂದ ಬೆಂಗಳೂರಿನ ಬೀದಿ ವ್ಯಾಪಾರಿ ಟಿ.ಎಸ್. ನಿಂಗಮ್ಮ ಅವರು ತಮ್ಮ ವ್ಯಾಪಾರವನ್ನು ವಿಸ್ತರಿಸಿಕೊಂಡಿದ್ದಾರೆ.

‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ನಿಂಗಮ್ಮ ಅವರ ಯಶೋಗಾಥೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ.

ನಿಂಗಮ್ಮ ಅವರು ಆರಂಭದಲ್ಲಿ ₹10,000 ಸಾಲ ಪಡೆದು, ಬಳಿಕ ₹20,000 ಹಾಗೂ ₹50,000 ಸಾಲ ಪಡೆದು ವ್ಯಾಪಾರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಿದ್ದಾರೆ. ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ.

ನಿಂಗಮ್ಮ ಅವರ ಯಶೋಗಾಥೆ ಪಿಎಂ ಸ್ವನಿಧಿ ಯೋಜನೆಯ ಪ್ರಯೋಜನ ಪಡೆದ ಬೀದಿ ವ್ಯಾಪಾರಿಗಳಿಗೆ ಉತ್ತಮ ಉದಾಹರಣೆಯಾಗಿದೆ.


Advertisement

Recent Posts

error: Content is protected !!
Scroll to Top