
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮುಂಬರುವ ಚುನಾವಣೆಗೆ NDA ಅಭ್ಯರ್ಥಿಯಾಗಿ ಶ್ರೀ ಎ.ಪಿ. ರಂಗನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಎ.ಪಿ. ರಂಗನಾಥ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ NDA ಅಭ್ಯರ್ಥಿಯಾಗಿ ರಂಗನಾಥ್ ಕಣಕ್ಕಿಳಿಯುವುದು ಖಚಿತವಾಗಿದೆ.
ಶಿಕ್ಷಕರ ಸಮಸ್ಯೆಗಳು, ಹಕ್ಕುಗಳು, ಗೌರವ ಹಾಗೂ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಧ್ವನಿಯಾಗುವ ಸಮರ್ಥ ನಾಯಕತ್ವದ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಎ.ಪಿ. ರಂಗನಾಥ್ ಅವರ ಆಯ್ಕೆ ಮಹತ್ವ ಪಡೆದಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಶಿಕ್ಷಕ ಬಂಧುಗಳು ಹಾಗೂ NDA ಕಾರ್ಯಕರ್ತರು ಒಗ್ಗಟ್ಟಿನಿಂದ ಬೆಂಬಲಿಸಿ, ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಲಾಗಿದೆ.







