ನಾಲ್ಕನೇ ಶ್ರಾವಣ ಶನಿವಾರ: ಅರಿಶಿನ-ಕುಂಕುಮ ಅಲಂಕಾರದಲ್ಲಿ ಕಂಗೊಳಿಸಿದ ಕುರುಟಹಳ್ಳಿ ಶ್ರೀ ವೀರಾಂಜನೇಯ ಸ್ವಾಮಿ!


ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಟಹಳ್ಳಿಯ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಾಲ್ಕನೇ ಹಾಗೂ ಕೊನೆಯ ಶ್ರಾವಣ ಶನಿವಾರದ ಪ್ರಯುಕ್ತ ಸ್ವಾಮಿಯವರಿಗೆ ವಿಶೇಷ ಅರಿಶಿನ-ಕುಂಕುಮ ಅಲಂಕಾರ ನೆರವೇರಿಸಲಾಯಿತು.

ಅರ್ಚಕರಾದ ಶ್ರೀ ರಾಮಚಂದ್ರ ಸ್ವಾಮಿ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಧಾರ್ಮಿಕ ವಿಧಿವಿಧಾನಗಳು ಭಕ್ತಿಭಾವದಿಂದ ಜರುಗಿದವು. ವಿವಿಧ ಸ್ಥಳಗಳಿಂದ ಆಗಮಿಸಿದ ಭಕ್ತಾದಿಗಳು ಶ್ರೀ ವೀರಾಂಜನೇಯ ಸ್ವಾಮಿಯ ದರ್ಶನ ಪಡೆದು, ಸ್ವಾಮಿಯ ಕೃಪೆಗೆ ಪಾತ್ರರಾದರು.ಈ ಸಂದರ್ಭದಲ್ಲಿ ಮಹಾಮಂಗಳಾರತಿ ನೆರವೇರಿಸಲಾಯಿತು.

ಬಳಿಕ ಭಕ್ತಾದಿಗಳಿಗೆ ತೀರ್ಥ ಹಾಗೂ ಪ್ರಸಾದ ವಿನಿಯೋಗ ನಡೆಯಿತು.ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಸ್ವಾಮಿಯ ಆಶೀರ್ವಾದ ಪಡೆದರು.ಸರ್ವರಿಗೂ ಶ್ರೀ ವೀರಾಂಜನೇಯ ಸ್ವಾಮಿಯ ಅನುಗ್ರಹ ಹಾಗೂ ಹನುಮನ ಆಶೀರ್ವಾದ ಸದಾ ಇರಲಿ.


Advertisement

Recent Posts

error: Content is protected !!
Scroll to Top