
ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಅಧಿಕೃತವಾಗಿ ಆಚರಿಸಲು ಸರ್ಕಾರಕ್ಕೆ ಮನವಿ
ಕಲಬುರಗಿ: ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಕರ್ನಾಟಕ ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸುವಂತೆ ಜಿಲ್ಲಾ ಬ್ರಾಹ್ಮಣ ಸಂಘ, ಕಲಬುರಗಿ ವತಿಯಿಂದ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಗೌರವಪೂರ್ವಕವಾಗಿ ಮನವಿ ಸಲ್ಲಿಸಲಾಯಿತು.
ಕಲಬುರಗಿಗೆ ಆಗಮಿಸಿದ್ದ ಉಪಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ಶ್ರೀ ಮಧ್ವಾಚಾರ್ಯರ ತತ್ತ್ವ, ಜ್ಞಾನ ಮತ್ತು ಭಕ್ತಿ ಪರಂಪರೆಯ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಅವರ ದಾರ್ಶನಿಕ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ಜಯಂತಿಯನ್ನು ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ಮುಖಂಡರು ಹಾಗೂ ಸಮಾಜದ ಗಣ್ಯರು ಉಪಸ್ಥಿತರಿದ್ದರು.







