Uncategorized

Uncategorized

Rotaract Bangalore JP Nagar Raises ₹3 Lakh for Breast Cancer Research

Bangalore: The Rotaract Club of Bangalore JP Nagar raised ₹3 lakh to support cancer treatment and breast cancer research through Party in Pink 5.0, the fifth edition of its flagship Zumba fundraiser, held at SSMRV College in Jayanagar 4th T Block on October 11. More than 200 people took part in the event, which began at 7.30 am. Aimed at promoting breast cancer awareness, early detection and access to treatment, the event was led by project chair Rtr. Manish S Chikmath, with Rtr. Karthik M S and Rtr. Drishti Mishra as co-chairs. The guests included Rtn. Dr. Harini Ravindranath, District Governor-Elect, Rotary International District 3191; Lt Cdr Sanjay Venkatesh (Retd.); Ananya Bhat, Filmfare Award South-winning playback singer known for her songs in KGF; and Dr. Kanyadhara Lohita Krishna, Consultant Surgical Oncologist specialising in breast cancer and tumour biology. Chartered in 2021 under Rotary International District 3191, the club is a youth-led service organisation. It has undertaken more than 300 projects and contributed over 7,500 volunteering hours across healthcare, education, menstrual hygiene and environmental initiatives, and has received around 40 awards.

Bangalore News / ಬೆಂಗಳೂರು ಸುದ್ದಿ, Cinema News / ಸಿನಿಮಾ ಸುದ್ದಿ | Kannada Cinema News | Sandalwood News, Popular News, Uncategorized

Anant Nag Dadasaheb Phalke Award 2024 | ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024

ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024 ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅಪಾರ ಕೊಡುಗೆಯನ್ನು ಗುರುತಿಸಿ, ಹಿರಿಯ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024 ನೀಡಿ ಗೌರವಿಸಲು ನಿರ್ಧರಿಸಲಾಗಿದೆ. ಹಲವು ದಶಕಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಅವರು, ಕನ್ನಡ ಸೇರಿದಂತೆ ಹಿಂದಿ, ತೆಲುಗು, ತಮಿಳು, ಮರಾಠಿ ಹಾಗೂ ಮಲಯಾಳಂ ಭಾಷೆಗಳ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ತಮ್ಮ ಅಭಿನಯದ ಮೂಲಕ ಭಾರತೀಯ ಚಿತ್ರರಂಗದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಅನಂತ್ ನಾಗ್ ಅವರ ಸಾಧನೆಯನ್ನು ಭಾರತ ಸರ್ಕಾರ ಗುರುತಿಸಿದೆ.

Bangalore News / ಬೆಂಗಳೂರು ಸುದ್ದಿ, Karntaka Politics, Political News, Popular News, Uncategorized

ST Somashekar | ಮುಂದಿನ ಬಾರಿ ವಿಜಯೇಂದ್ರ MLA ಆಗುವುದಿಲ್ಲ: ಎಸ್.ಟಿ. ಸೋಮಶೇಖರ್

ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಬಿ.ವೈ. ವಿಜಯೇಂದ್ರ ವಿರುದ್ಧ ಮಾತನಾಡಿದ್ದಾರೆ. ಕನ್ನಡ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಮುಂದಿನ ಬಾರಿ ಎಂಎಲ್‌ಎ ಆಗುವುದಿಲ್ಲ. ಅವರು ಮುಖ್ಯಮಂತ್ರಿ ಆಗುವ ಮಾತೇ ಬೇಡ ಎಂದು ಹೇಳಿದ್ದಾರೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಗರಾಜ್ ಗೌಡ ಅವರಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಿದ್ದರೆ, ವಿಜಯೇಂದ್ರ ಗೆಲ್ಲುತ್ತಿರಲಿಲ್ಲ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಸೋಲಿಸುವುದಿರಲಿ, ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಎಂಎಲ್‌ಎ ಆಗಿ ಗೆಲ್ಲುವುದಿಲ್ಲ. ಈಗಾಗಲೇ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರಿಸುವುದೇ ಕಷ್ಟವಾಗಿದೆ ಎಂದು ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ..

Bangalore News / ಬೆಂಗಳೂರು ಸುದ್ದಿ, Karntaka Politics, Political News, Uncategorized

PM Narendra Modi | ಪಿಎಂ ಸ್ವನಿಧಿಯಿಂದ ನಿಂಗಮ್ಮ ಅವರ ವ್ಯಾಪಾರಕ್ಕೆ ಹೊಸ ಚೈತನ್ಯ

ಬೆಂಗಳೂರು: ಪಿಎಂ ಸ್ವನಿಧಿ ಯೋಜನೆಯ ನೆರವಿನಿಂದ ಬೆಂಗಳೂರಿನ ಬೀದಿ ವ್ಯಾಪಾರಿ ಟಿ.ಎಸ್. ನಿಂಗಮ್ಮ ಅವರು ತಮ್ಮ ವ್ಯಾಪಾರವನ್ನು ವಿಸ್ತರಿಸಿಕೊಂಡಿದ್ದಾರೆ. ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ನಿಂಗಮ್ಮ ಅವರ ಯಶೋಗಾಥೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ನಿಂಗಮ್ಮ ಅವರು ಆರಂಭದಲ್ಲಿ ₹10,000 ಸಾಲ ಪಡೆದು, ಬಳಿಕ ₹20,000 ಹಾಗೂ ₹50,000 ಸಾಲ ಪಡೆದು ವ್ಯಾಪಾರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಿದ್ದಾರೆ. ಸಾಲವನ್ನು ಸಕಾಲದಲ್ಲಿ ಮರುಪಾವತಿಸುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಂಡಿದ್ದಾರೆ. ನಿಂಗಮ್ಮ ಅವರ ಯಶೋಗಾಥೆ ಪಿಎಂ ಸ್ವನಿಧಿ ಯೋಜನೆಯ ಪ್ರಯೋಜನ ಪಡೆದ ಬೀದಿ ವ್ಯಾಪಾರಿಗಳಿಗೆ ಉತ್ತಮ ಉದಾಹರಣೆಯಾಗಿದೆ.

Uncategorized

Congress MLA Prakash Kolivad | ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ಸೌಹಾರ್ದ: ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್‌ಗೆ ಶಾಸಕ ಪ್ರಕಾಶ್ ಕೋಳಿವಾಡ್ ಹುಟ್ಟುಹಬ್ಬದ ಶುಭಾಶಯ

ರಾಣೇಬೆನ್ನೂರು: ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯವಾಗಿರುವ ಇಂದಿನ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ್ ಅವರು ಬಿಜೆಪಿಯ ಮಾಜಿ ಶಾಸಕ ಹಾಗೂ ಆತ್ಮೀಯರಾದ ಶ್ರೀ ಅರುಣ್ ಕುಮಾರ್ ಪೂಜಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿರುವುದು ಗಮನ ಸೆಳೆದಿದೆ. “ಮಾಜಿ ಶಾಸಕರು, ಆತ್ಮೀಯರಾದ ಶ್ರೀ ಅರುಣ್ ಕುಮಾರ್ ಪೂಜಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ಇನ್ನೂ ಹೆಚ್ಚಿನ ಆಯುಷ್ಯ, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಕಾಶ್ ಕೋಳಿವಾಡ್ ಅವರು ಫೇಸ್‌ಬುಕ್ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಅವರು ಕೂಡ ಪ್ರಕಾಶ್ ಕೋಳಿವಾಡ್ ಅವರಿಗೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸಿದ್ದಾರೆ. ಸಾಮಾನ್ಯವಾಗಿ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು, ಭಿನ್ನಾಭಿಪ್ರಾಯಗಳು ಕಂಡುಬರುವ ಸಂದರ್ಭದಲ್ಲಿ ಎರಡು ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ನಡುವಿನ ಈ ಸೌಹಾರ್ದಯುತ ನಡೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ. ಉಭಯ ಪಕ್ಷಗಳ ಕಾರ್ಯಕರ್ತರಿಂದಲೂ ಈ ಬೆಳವಣಿಗೆಗೆ ಹರ್ಷ ವ್ಯಕ್ತವಾಗಿದೆ.

Uncategorized

Congress MLA Prakash Koliwad | ಹೆಲ್ಮೆಟ್ ಇಲ್ಲದೆ ಬುಲೆಟ್ ರೈಡ್: ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ್‌ಗೆ ₹500 ದಂಡ

ಹಾವೇರಿ: ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ್ ಕೋಳಿವಾಡ್ ಅವರಿಗೆ ಟ್ರಾಫಿಕ್ ಪೊಲೀಸರು ₹500 ದಂಡ ವಿಧಿಸಿದ್ದಾರೆ. ಆಗಸ್ಟ್ 25ರಂದು ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ರಾಣೇಬೆನ್ನೂರು ಟ್ರಾಫಿಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ₹500 ದಂಡದ ನೋಟಿಸ್ ಶಾಸಕರ ಮನೆ ಬಾಗಿಲಿಗೆ ತಲುಪಿದ್ದು, ನೋಟಿಸ್ ಆಧಾರದಲ್ಲಿ ಶಾಸಕ ಪ್ರಕಾಶ್ ಕೋಳಿವಾಡ್ ದಂಡ ಪಾವತಿಸಿದ್ದಾರೆ. ನೋಟಿಸ್ ನೀಡಿರುವ ವಿಷಯವನ್ನು ಶಾಸಕರು ತಮ್ಮ ಫೇಸ್‌ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. “SP ಮೇಡಂ ಅವರು ನನಗೆ ನೋಟಿಸ್ ನೀಡಿದ್ದಾರೆ. ಅವರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ, ಅವರನ್ನು ಗೌರವಿಸುತ್ತೇನೆ” ಎಂದು ಶಾಸಕ ಪ್ರಕಾಶ್ ಕೋಳಿವಾಡ್ ತಿಳಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪೊಲೀಸರು ಯಾವುದೇ ಹುದ್ದೆ ಅಥವಾ ಸ್ಥಾನಮಾನ ಪರಿಗಣಿಸದೆ ಕ್ರಮ ಕೈಗೊಂಡಿರುವುದು ಗಮನ ಸೆಳೆದಿದೆ.

error: Content is protected !!
Scroll to Top