Congress MLA Prakash Kolivad | ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ಸೌಹಾರ್ದ: ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್‌ಗೆ ಶಾಸಕ ಪ್ರಕಾಶ್ ಕೋಳಿವಾಡ್ ಹುಟ್ಟುಹಬ್ಬದ ಶುಭಾಶಯ


ರಾಣೇಬೆನ್ನೂರು: ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳು ಸಾಮಾನ್ಯವಾಗಿರುವ ಇಂದಿನ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ್ ಅವರು ಬಿಜೆಪಿಯ ಮಾಜಿ ಶಾಸಕ ಹಾಗೂ ಆತ್ಮೀಯರಾದ ಶ್ರೀ ಅರುಣ್ ಕುಮಾರ್ ಪೂಜಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿರುವುದು ಗಮನ ಸೆಳೆದಿದೆ.

“ಮಾಜಿ ಶಾಸಕರು, ಆತ್ಮೀಯರಾದ ಶ್ರೀ ಅರುಣ್ ಕುಮಾರ್ ಪೂಜಾರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ಇನ್ನೂ ಹೆಚ್ಚಿನ ಆಯುಷ್ಯ, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಕಾಶ್ ಕೋಳಿವಾಡ್ ಅವರು ಫೇಸ್‌ಬುಕ್ ಮೂಲಕ ಶುಭಾಶಯ ತಿಳಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ ಅವರು ಕೂಡ ಪ್ರಕಾಶ್ ಕೋಳಿವಾಡ್ ಅವರಿಗೆ ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.

ಸಾಮಾನ್ಯವಾಗಿ ರಾಜಕೀಯ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು, ಭಿನ್ನಾಭಿಪ್ರಾಯಗಳು ಕಂಡುಬರುವ ಸಂದರ್ಭದಲ್ಲಿ ಎರಡು ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ನಡುವಿನ ಈ ಸೌಹಾರ್ದಯುತ ನಡೆ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಗಮನ ಸೆಳೆದಿದೆ. ಉಭಯ ಪಕ್ಷಗಳ ಕಾರ್ಯಕರ್ತರಿಂದಲೂ ಈ ಬೆಳವಣಿಗೆಗೆ ಹರ್ಷ ವ್ಯಕ್ತವಾಗಿದೆ.


Advertisement

Recent Posts

error: Content is protected !!
Scroll to Top