
ಬೆಂಗಳೂರು: ಜೆಡಿಎಸ್ ಬೆಂಗಳೂರು ನಗರ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಅವರ ಧರ್ಮಪತ್ನಿ, HMR Group of Institutionsನ CEO ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ. ಎ. ರಮ್ಯಾ ರಮೇಶ್ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಶ್ರೇಷ್ಠ ಸೇವೆ, ಸಾಧನೆ ಹಾಗೂ ಸಮಾಜಕ್ಕೆ ನೀಡುತ್ತಿರುವ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ ಪ್ರತಿಷ್ಠಿತ ‘The Great Daughter of India’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಿದ ಡಾ. ಎ. ರಮ್ಯಾ ರಮೇಶ್ ಅವರಿಗೆ ಕುಟುಂಬಸ್ಥರು ಹಾಗೂ HMR ಕುಟುಂಬದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.
ಅವರ ಪರಿಶ್ರಮ, ಸಮರ್ಪಣೆ ಹಾಗೂ ಸಾಧನೆಯ ಪಯಣ ಮತ್ತಷ್ಟು ಎತ್ತರಕ್ಕೆ ಸಾಗಲಿ, ಸಮಾಜಕ್ಕೆ ಇನ್ನಷ್ಟು ಪ್ರೇರಣೆಯಾಗಲಿ ಎಂದು ಶುಭ ಹಾರೈಸಲಾಗಿದೆ.







