
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ತಾಯಿಯ ಪುಣ್ಯಸ್ಮರಣೆಯ ಪ್ರಯುಕ್ತ ನಾಲ್ಕು ಬಡ ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಯಿಯ ನೆನಪನ್ನು ಸಮಾಜಮುಖಿ ಕಾರ್ಯದ ಮೂಲಕ ಸ್ಮರಿಸಿದ ಸುದೀಪ್ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಸುದೀಪ್ ಅವರ ಪತ್ನಿ ಹಾಗೂ ಅಳಿಯ ಸಂಚಿತ್ ಸಂಜೀವ್ ಉಪಸ್ಥಿತರಿದ್ದು, ಆಟೋ ರಿಕ್ಷಾಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ತಾಯಿಯ ಮೇಲಿನ ಪ್ರೀತಿಯನ್ನು ಸೇವೆಯ ರೂಪದಲ್ಲಿ ಅರ್ಪಿಸಿದ ಕಿಚ್ಚ ಸುದೀಪ್ ಅವರ ಕಾರ್ಯಕ್ಕೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಯ ಮಹಾಪೂರವೇ ಹರಿದಿದೆ.







