
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲಾ ಭಾರತೀಯ ಜನತಾ ಪಕ್ಷದ (ಬಿಜೆಪಿ) ಯುವ ಮೋರ್ಚಾ ಅಧ್ಯಕ್ಷರಾಗಿ ಪ್ರಮೋದ್ ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದೆ.
ಇತ್ತೀಚೆಗಷ್ಟೇ ಪ್ರಮೋದ್ ಶ್ರೀನಿವಾಸ್ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಪ್ತ ಶಿಷ್ಯ ಬಳಗದಲ್ಲಿ ಗುರುತಿಸಿಕೊಂಡಿದ್ದ ಪ್ರಮೋದ್ ಶ್ರೀನಿವಾಸ್, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳಿಂದ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.

ಇದೀಗ ಮತ್ತೆ ಬಿಜೆಪಿಗೆ ಮರಳಿರುವ ಪ್ರಮೋದ್ ಶ್ರೀನಿವಾಸ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಲಾಗಿದ್ದು, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಪಕ್ಷಕ್ಕೆ ಮರಳಿದ ಕೆಲವೇ ದಿನಗಳಲ್ಲಿ ಪ್ರಮುಖ ಜವಾಬ್ದಾರಿ ದೊರೆತಿರುವುದು ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಯುವ ಮೋರ್ಚಾ ಅಧ್ಯಕ್ಷರಾಗಿ ಪ್ರಮೋದ್ ಶ್ರೀನಿವಾಸ್ ಅವರು ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಹಾಗೂ ಯುವ ಕಾರ್ಯಕರ್ತರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.







