Satish Jarkiholi | ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ – ಕೋಟಿ ಕೋಟಿ ಹಣ, ಆಫ್ರಿಕಾ ಚಿನ್ನದ ಗಣಿಗಳ ಹೂಡಿಕೆ ಕುರಿತು ಸ್ಫೋಟಕ ಆರೋಪ!


ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ನಿವಾಸ ಹಾಗೂ ಆಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ ಎಂಬ ಮಾಹಿತಿ ಭಾರೀ ಸಂಚಲನ ಮೂಡಿಸಿದೆ.ED ಹೇಳಿಕೆಯ ಪ್ರಕಾರ, ₹3.3 ಕೋಟಿ ಭಾರತೀಯ ಕರೆನ್ಸಿ, 15 ಲಕ್ಷ ಡಾಲರ್ ಹಾಗೂ ಯುರೋ ಕರೆನ್ಸಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.

ಇದರ ಜೊತೆಗೆ, ಆಫ್ರಿಕಾದ ಪ್ರಮುಖ ಚಿನ್ನದ ಗಣಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಹೂಡಿಕೆ ಹಾಗೂ ಶೇ.40ರಷ್ಟು ಪಾಲುದಾರಿಕೆ ಹೊಂದಿರುವ ಕುರಿತು ತನಿಖೆಯಲ್ಲಿ ಮಾಹಿತಿ ಬಹಿರಂಗವಾಗಿದೆ ಎಂಬ ಆರೋಪ ಕೇಳಿಬಂದಿದೆ.ಸತೀಶ್ ಜಾರಕಿಹೊಳಿ ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿ ಆಫ್ರಿಕಾದ ಚಿನ್ನದ ಗಣಿಗಳನ್ನು ಖರೀದಿಸಲಾಗಿದೆ ಎಂಬ ಆರೋಪವೂ ED ತನಿಖೆಯಲ್ಲಿ ಉಲ್ಲೇಖವಾಗಿದೆ ಎಂದು ವರದಿಯಾಗಿದೆ.

BVEPL ಸೇರಿದಂತೆ ಕೆಲವು ಕಂಪನಿಗಳಿಗೆ PWD ಇಲಾಖೆಯಿಂದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಟೆಂಡರ್‌ಗಳನ್ನು ನೀಡಲಾಗಿದ್ದು, ಅದರಿಂದ ಪಡೆದಿದ್ದರೆನ್ನಲಾದ ಅಕ್ರಮ ಹಣವನ್ನು ಆಫ್ರಿಕಾದ ಚಿನ್ನದ ಗಣಿಗಳಲ್ಲಿ ಹೂಡಿಕೆ ಮಾಡಲಾಗಿದೆ ಎಂಬ ಗಂಭೀರ ಆರೋಪಗಳೂ ಕೇಳಿಬಂದಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ED ತನಿಖೆ ಮುಂದುವರಿದಿದ್ದು, ಮತ್ತಷ್ಟು ಸ್ಫೋಟಕ ಮಾಹಿತಿಗಳು ಹೊರಬೀಳುವ ಸಾಧ್ಯತೆ ಇದೆ.


Advertisement

Recent Posts

error: Content is protected !!
Scroll to Top