Duniya Vijay | ದುನಿಯಾ ವಿಜಯ್-ನಾಗರತ್ನ ವಿಚ್ಛೇದನ: ಪತ್ನಿಗೆ ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಆದೇಶ | Kannadigara Vani

ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಹಲವು ವರ್ಷಗಳ ದಾಂಪತ್ಯ ವಿವಾದಕ್ಕೆ ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ನ್ಯಾಯಾಲಯವು ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿದ್ದು, ನಾಗರತ್ನ ಅವರಿಗೆ ₹2 ಕೋಟಿ ಶಾಶ್ವತ ಜೀವನಾಂಶ ನೀಡುವಂತೆ ದುನಿಯಾ ವಿಜಯ್ ಅವರಿಗೆ ನಿರ್ದೇಶನ ನೀಡಿದೆ. ಇದೇ ವೇಳೆ, ದಂಪತಿಯ ಮೂವರು ಮಕ್ಕಳ ಪೋಷಣೆ, ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿಯನ್ನು ದುನಿಯಾ ವಿಜಯ್ ಅವರೇ ವಹಿಸಿಕೊಳ್ಳಬೇಕು ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಈ ಕೌಟುಂಬಿಕ ವ್ಯಾಜ್ಯಕ್ಕೆ ಹೈಕೋರ್ಟ್ ತೀರ್ಪಿನ ಮೂಲಕ ಕಾನೂನಾತ್ಮಕ ಅಂತ್ಯ ದೊರೆತಿದೆ.

error: Content is protected !!