Duniya Vijay | ದುನಿಯಾ ವಿಜಯ್-ನಾಗರತ್ನ ವಿಚ್ಛೇದನ: ಪತ್ನಿಗೆ ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಆದೇಶ | Kannadigara Vani

ಬೆಂಗಳೂರು: ನಟ ದುನಿಯಾ ವಿಜಯ್ ಹಾಗೂ ನಾಗರತ್ನ ಅವರ ಹಲವು ವರ್ಷಗಳ ದಾಂಪತ್ಯ ವಿವಾದಕ್ಕೆ ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ನ್ಯಾಯಾಲಯವು ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿದ್ದು, ನಾಗರತ್ನ ಅವರಿಗೆ ₹2 ಕೋಟಿ ಶಾಶ್ವತ ಜೀವನಾಂಶ ನೀಡುವಂತೆ ದುನಿಯಾ ವಿಜಯ್ ಅವರಿಗೆ ನಿರ್ದೇಶನ ನೀಡಿದೆ. ಇದೇ ವೇಳೆ, ದಂಪತಿಯ ಮೂವರು ಮಕ್ಕಳ ಪೋಷಣೆ, ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿಯನ್ನು ದುನಿಯಾ ವಿಜಯ್ ಅವರೇ ವಹಿಸಿಕೊಳ್ಳಬೇಕು ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ. ವರ್ಷಗಳಿಂದ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಈ ಕೌಟುಂಬಿಕ ವ್ಯಾಜ್ಯಕ್ಕೆ ಹೈಕೋರ್ಟ್ ತೀರ್ಪಿನ ಮೂಲಕ ಕಾನೂನಾತ್ಮಕ ಅಂತ್ಯ ದೊರೆತಿದೆ.

Kiccha Sudeepa | ತಾಯಿಯ ಪುಣ್ಯಸ್ಮರಣೆಗೆ ಕಿಚ್ಚನ ಅರ್ಥಪೂರ್ಣ ಸೇವೆ: 4 ಬಡ ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ದಾನ!

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ತಮ್ಮ ತಾಯಿಯ ಪುಣ್ಯಸ್ಮರಣೆಯ ಪ್ರಯುಕ್ತ ನಾಲ್ಕು ಬಡ ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾಗಳನ್ನು ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಯಿಯ ನೆನಪನ್ನು ಸಮಾಜಮುಖಿ ಕಾರ್ಯದ ಮೂಲಕ ಸ್ಮರಿಸಿದ ಸುದೀಪ್ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಸುದೀಪ್ ಅವರ ಪತ್ನಿ ಹಾಗೂ ಅಳಿಯ ಸಂಚಿತ್ ಸಂಜೀವ್ ಉಪಸ್ಥಿತರಿದ್ದು, ಆಟೋ ರಿಕ್ಷಾಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ತಾಯಿಯ ಮೇಲಿನ ಪ್ರೀತಿಯನ್ನು ಸೇವೆಯ ರೂಪದಲ್ಲಿ ಅರ್ಪಿಸಿದ ಕಿಚ್ಚ ಸುದೀಪ್ ಅವರ ಕಾರ್ಯಕ್ಕೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಮೆಚ್ಚುಗೆಯ ಮಹಾಪೂರವೇ ಹರಿದಿದೆ.

error: Content is protected !!