ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಬಿ.ವೈ. ವಿಜಯೇಂದ್ರ ವಿರುದ್ಧ ಮಾತನಾಡಿದ್ದಾರೆ. ಕನ್ನಡ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಮುಂದಿನ ಬಾರಿ ಎಂಎಲ್‌ಎ ಆಗುವುದಿಲ್ಲ. ಅವರು ಮುಖ್ಯಮಂತ್ರಿ ಆಗುವ ಮಾತೇ ಬೇಡ ಎಂದು ಹೇಳಿದ್ದಾರೆ. 2023ರ ಚುನಾವಣೆಯಲ್ಲಿ ಕಾಂಗ್ರೆಸ್ ನಾಗರಾಜ್ ಗೌಡ ಅವರಿಗೆ ಶಿಕಾರಿಪುರದಲ್ಲಿ ಟಿಕೆಟ್ ನೀಡಿದ್ದರೆ, ವಿಜಯೇಂದ್ರ ಗೆಲ್ಲುತ್ತಿರಲಿಲ್ಲ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಸೋಲಿಸುವುದಿರಲಿ, ಮುಂದಿನ ಚುನಾವಣೆಯಲ್ಲಿ ವಿಜಯೇಂದ್ರ ಎಂಎಲ್‌ಎ ಆಗಿ ಗೆಲ್ಲುವುದಿಲ್ಲ. ಈಗಾಗಲೇ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರಿಸುವುದೇ ಕಷ್ಟವಾಗಿದೆ ಎಂದು ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ..
